ಮನೆ ಕೆಲಸದಾಕೆ ಮೇಲೆ ಅತ್ಯಾಚಾರ-ಅಪಹರಣ:ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಪರಾಧಿ.

ಮನೆ ಕೆಲಸದಾಕೆ ಮೇಲೆ ಅತ್ಯಾಚಾರ-ಅಪಹರಣ:ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಪರಾಧಿ.

ಮನೆ ಕೆಲಸದಾಕೆ ಮೇಲಿನ ಅತ್ಯಾಚಾರ ಮತ್ತು ಅಪಹರಣ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ್ದು,ನಾಳೆ ಶನಿವಾರ ಶಿಕ್ಷೆ ಪ್ರಕಟವಾಗಲಿದೆ.
     ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಇಂದು ಶುಕ್ರವಾರ ತೀರ್ಪು ಪ್ರಕಟಿಸಿದ್ದು,ಕನಿಷ್ಟ ಹತ್ತರಿಂದ ಜೀವಾವಧಿವರೆಗೆ ಶಿಕ್ಷೆ ನೀಡಬಹುದಾಗಿದೆ.
    ಈ ಪ್ರಕರಣದಲ್ಲಿ 118 ಸಾಕ್ಷಿಗಳು, 28 ಸರಕಾರಿ ಸಾಕ್ಷಿಗಳು ಹಾಗೂ ಡಿಜಿಟಲ್ ಸಾಕ್ಷಿಗಳನ್ನು ಪರಿಗಣಿಸಲಾಗಿತ್ತು.ಏಳೆಂಟು ಸೆಕ್ಷನ್ ಗಳ ಅಡಿಯಲ್ಲಿ ಎಲ್ಲದರಲ್ಲೂ ಅಪರಾಧ ಸಾಬೀತಾಗಿದೆ.
     ಮನೆ ಕೆಲಸಕ್ಕಿದ್ದ ಕೆ.ಆರ್.ನಗರದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ 2021 ರಲ್ಲಿ ಆಕೆಯನ್ನು ಹೊಳೆನರಸೀಪುರದ ತೋಟದ ಮನೆಯಲ್ಲಿ ಅಪಹರಿಸಿ ಇಡಲಾಗಿತ್ತು.ಈ ಬಗ್ಗೆ ಪ್ರಕರಣ ದಾಖಲಾಗಿ 2024 ಮೇ 31 ರಂದು ಪ್ರಜ್ವಲ್ ನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು.
    ತೀರ್ಪು ಪ್ರಕಟವಾಗುತ್ತಿದ್ದಂತೆ ನ್ಯಾಯಾಲಯದಲ್ಲಿ ಕಣ್ಣೀರಿಡುತ್ತಾ ಅವರು ಹೊರ ನಡೆದರು.ಜುಲೈ 29 ರಂದೇ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ನ್ಯಾಯಾಲಯ ತೀರ್ಪನ್ನು ಕಾದಿರಿಸಿತ್ತು.ಈ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿತ್ತು.