ಸಚಿವ ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ವಜಾ
ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಲಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಶಿಫಾರಸ್ಸಿನಂತೆ ರಾಜ್ಯಪಾಲರು ಕ್ರಮ ಕೈಗೊಂಡಿದ್ದಾರೆ.ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿಗೆ ವಜಾ ಆದೇಶದ ಪತ್ರವನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.
ಮತಪತ್ರಗಳ ಕಳ್ಳತನ ಕುರಿತು ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ಶುಕ್ರವಾರ ನಡೆಸಿದ ಪ್ರತಿಭಟನಾ ಸಮಾವೇಶದ ಬೆನ್ನಲ್ಲೇ ಸಚಿವರು ಪಕ್ಷಕ್ಕೆ ಮುಜುಗರ ತರುವಂತಹ ಹೇಳಿಕೆ ನೀಡಿದ್ದರು.ಕಾಂಗ್ರೆಸ್ ಸರಕಾರದ ಅವಧಿಯಲ್ಲೇ ಮತಪಟ್ಟಿಗಳ ಪರಿಷ್ಕರಣೆ ನಡೆದಿರುವುದಾಗಿ ಅವರು ಬಹಿರಂಗ ಹೇಳಿಕೆ ನೀಡಿದ್ದರು.ಇದರಿಂದಾಗಿ ಪಕ್ಷ ತೀವ್ರ ಮುಜುಗರಕ್ಕೀಡಾಗಿತ್ತು..


