ಒಳಮೀಸಲಾತಿ ಜಾರಿಯಾದ ತಕ್ಷಣ 18 ಸಾವಿರ ಶಿಕ್ಷಕರ ಭರ್ತಿ:ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಒಳಮೀಸಲಾತಿ ಜಾರಿಯಾದ ತಕ್ಷಣ 18 ಸಾವಿರ ಶಿಕ್ಷಕರ ಭರ್ತಿ:ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ

ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾದ ತಕ್ಷಣ ಹದಿನೆಂಟು ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
     ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ತಾಳವಟ್ಟಿ ಗ್ರಾಮದಲ್ಲಿ ಅವರು ಶನಿವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
      ನಾನು ಸಚಿವನಾಗುವ ಮೊದಲು ಅರುವತ್ತು ಸಾವಿರ ಶಿಕ್ಷಕರ ಹುದ್ದೆಗಳು  ಖಾಲಿಯಿದ್ದವು ಅವುಗಳಲ್ಲಿ ಹದಿಮೂರು ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದರು.
     ರಾಜ್ಯದಲ್ಲಿ ಪ್ರಸ್ತುತ ಮುನ್ನೂರ ಏಳು ಕರ್ನಾಟಕ ಪಬ್ಲಿಕ್ ಶಾಲೆಗಳಿದ್ದು,ಈ ವರ್ಷವೇ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ನೂರು ಸೇರಿದಂತೆ ಒಟ್ಟು ಆರುನೂರು ಪಬ್ಲಿಕ್ ಶಾಲೆಗಳನ್ನು ಹೊಸದಾಗಿ ಆರಂಭಿಸಲಾಗುವುದು ಎಂದರು.
      ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ನಕಲು ತಡೆಗಟ್ಟಲು ವೆಬ್ ಕಾಸ್ಟಿಂಗ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.ಮೂರು ಹಂತದ ಪರೀಕ್ಷಾ ವಿಧಾನವನ್ನು ಅಳವಡಿಸಲಾಗಿದೆ ಎಂದರು.ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸರಕಾರದೊಂದಿಗೆ ದಾನಿಗಳು, ಹಿರಿಯ ವಿದ್ಯಾರ್ಥಿಗಳು, ಜನಪ್ರತಿನಿಧಿಗಳು ಕೈ ಜೋಡಿಸಬೇಕೆಂದು ಅವರು ಮನವಿ ಮಾಡಿದರು.ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಮಾರಂಭದಲ್ಲಿ ಭಾಗವಹಿಸಿದ್ದರು.