ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ನಿಗೆ ಇ.ಡಿ.ನೀಡಿದ್ದ ಸಮನ್ಸ್ ರದ್ದು----ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್

ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪತ್ನಿಗೆ ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.ಈ ಕುರಿತು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪತ್ನಿಗೆ ಮುಡಾದಿಂದ ಹಂಚಿಕೆಯಾಗಿದ್ದ ನಿವೇಶನಗಳ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.ಈ ಕುರಿತು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ,ಕೆ.ವಿನೋದಚಂದ್ರ ಅವರಿದ್ದ ಪೀಠವು ವಿಚಾರಣೆಯಲ್ಲಿ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ರಾಜು ಅವರನ್ನು ತರಾಟೆಗೆ ತೆಗೆದುಕೊಂಡಿದೆ.ರಾಜಕೀಯ ಹೋರಾಟಗಳು ಚುನಾವಣೆಯಲ್ಲಿ ನಡೆಯಲಿ,ಇದರಲ್ಲಿ ನಿಮ್ಮನ್ನು ಏಕೆ ಬಳಸಿಕೊಳ್ಳಬೇಕು ಎಂದು ಕೇಂದ್ರ ಸರಕಾರವನ್ನು ಪರೋಕ್ಷವಾಗಿ ಕುಟುಕಿದೆ.ಬಾಯಿ ತೆರೆಯಲು ನಮಗೆ ಬಲವಂತ ಮಾಡಬೇಡಿ,ಇಲ್ಲದಿದ್ದಲ್ಲಿ ಇ.ಡಿ.ಬಗ್ಗೆ ತೀಕ್ಷ್ಣ ಟಿಪ್ಪಣಿ ಬರೆಯಬೇಕಾದೀತು ಎಂದು ಪೀಠ ಎಚ್ಚರಿಸಿದೆ.ಮಹಾರಾಷ್ಟ್ರದಲ್ಲಿ ನಮಗೆ ಕೆಲವು ಅನುಭವಗಳಾಗಿವೆ,ದೇಶಾದ್ಯಂತ ಇದನ್ನು ಮುಂದುವರೆಸಬಾರದು ಎಂದು ಪೀಠ ಸಲಹೆ ನೀಡಿತು. ಈ ತೀರ್ಪನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸ್ವಾಗತಿಸಿದ್ದಾರೆ.ಇದೊಂದು ಐತಿಹಾಸಿಕ ತೀರ್ಪೆಂದು ತಮ್ಮ ಎಕ್ಸ್ ಖಾತೆಯಲ್ಲಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಕಪೋಲ ಕಲ್ಪಿತ ಆರೋಪ ಮಾಡುತ್ತಿರುವ ಬಿಜೇಪಿ,ಜೇಡಿಎಸ್ ನಾಯಕರಿಗೆ ಕಿಂಚಿತ್ತೂ ಮಾನ ಮರ್ಯಾದೆ ಇದ್ದರೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸುವಂತೆ ಅವರು ಒತ್ತಾಯಿಸಿದ್ದಾರೆ. ಕೇಂದ್ರ ಸರಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿದೆ,ನನ್ನ ಸುದೀರ್ಘ ರಾಜಕೀಯದಲ್ಲಿ ಸದಾ ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವನು ನಾನು,ಈ ನಂಬಿಕೆಯನ್ನು ಸುಪ್ರೀಂಕೋರ್ಟ್ ಆದೇಶ ಕಾಪಾಡಿದೆ ಎಂದವರು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ನಿಗೆ ಇ.ಡಿ.ನೀಡಿದ್ದ ಸಮನ್ಸ್ ರದ್ದು----ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್